ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಶಾಸಕನ ತಾಯಿ ಸೇರಿದಂತೆ 20 ಸಾವಿರ ಮಂದಿ ಮತಾಂತರಗೊಂಡಿದ್ದಾರೆ.
ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಆಮಿಷವೊಡ್ಡಿ ಮತಾಂತರ ಮಾಡಲಾಗುತ್ತಿದೆ. ನಮ್ಮ ತಾಯಿ ಕೂಡ ಮತಾಂತರಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮತಾಂತರದ ಬಗ್ಗೆ ಪ್ರಶ್ನಿಸಿದವರ ವಿರುದ್ಧ ದೌರ್ಜನ್ಯ ಪ್ರಕರಣ, ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ಇದನ್ನು ತಡೆಯಲು ಮತಾಂತರ ತಡೆಗೆ ಕಾಯ್ದೆ ತರಬೇಕೆಂದು ಅವರು ಒತ್ತಾಯಿಸಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಜ್ಞಾನೇಂದ್ರ, ಮತಾಂತರ ತಡೆ ಕಾಯ್ದೆ ತರುವ ಚಿಂತನೆ ಇದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.