alex Certify ಸರ್ಕಾರಿ ಆಸ್ಪತ್ರೆಯಲ್ಲಿ ಮೊಮ್ಮಗನಿಗೆ ಚಿಕಿತ್ಸೆ ಕೊಡಿಸಿದ ಗೃಹ ಸಚಿವ ಜ್ಞಾನೇಂದ್ರ ಸರಳತೆಗೆ ಮೆಚ್ಚುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಆಸ್ಪತ್ರೆಯಲ್ಲಿ ಮೊಮ್ಮಗನಿಗೆ ಚಿಕಿತ್ಸೆ ಕೊಡಿಸಿದ ಗೃಹ ಸಚಿವ ಜ್ಞಾನೇಂದ್ರ ಸರಳತೆಗೆ ಮೆಚ್ಚುಗೆ

ಶಿವಮೊಗ್ಗ: ಗೃಹಸಚಿವ ಆರಗ ಜ್ಞಾನೇಂದ್ರ ಅವರ ಮೊಮ್ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ತೆರಳಿದ ಗೃಹಸಚಿವರು ಆರೋಗ್ಯ ವಿಚಾರಿಸಿದ್ದಾರೆ.

ಒಂದು ವರ್ಷದ ಮೊಮ್ಮಗ ಜ್ವರದಿಂದ ಬಳಲುತ್ತಿದ್ದು, ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಗೃಹಸಚಿವ ಜ್ಞಾನೇಂದ್ರ ಮೊಮ್ಮಗನ ಆರೋಗ್ಯ ಸುಧಾರಣೆ ಕುರಿತಂತೆ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಬಳಿಕ ಆಸ್ಪತ್ರೆಯಲ್ಲಿದ್ದ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಮೊಮ್ಮಗನಿಗೆ ಚಿಕಿತ್ಸೆ ಕೊಡಿಸಿದ ಆರಗ ಜ್ಞಾನೇಂದ್ರ ಮತ್ತು ಅವರ ಕುಟುಂಬದವರ ಸರಳತೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಗೃಹ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಮೊಮ್ಮಗನ ಆರೋಗ್ಯ ವಿಚಾರಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ಸರಳತೆಗೆ ಪ್ರಶಂಸೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...