ಬೆಂಗಳೂರು: ವಿಕಾಸಸೌಧದಲ್ಲಿ ಗೃಹ ಇಲಾಖೆ ನೂತನ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ 16,000 ಸಿಬ್ಬಂದಿಯ ಕೊರತೆ ಇದ್ದು, ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ. ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಲು ಖಾಲಿ ಹುದ್ದೆಗಳ ನೇಮಕಾತಿ ಹಂತ ಹಂತವಾಗಿ ನೇಮಕಾತಿ ನಡೆಯಲಿದೆ. ಇಲಾಖೆಯನ್ನು ಆಧುನೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಸಿಎಂ ಅಧ್ಯಕ್ಷತೆಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಶಿಸ್ತಿನಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದ ಅವರು, ಸಮಾಜಘಾತಕ ಶಕ್ತಿಗಳೊಂದಿಗೆ ಸಂಬಂಧವಿಟ್ಟುಕೊಂಡ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.