
ಬೆಂಗಳೂರು: ಅಗ್ನಿಶಾಮಕ ಸಿಬ್ಬಂದಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೃಹರಕ್ಷಕ ದಳ ಸಿಬ್ಬಂದಿಗೆ ದಿನಭತ್ಯೆಯನ್ನು 600 ರೂಪಾಯಿಗೆ ಹೆಚ್ಚಿಸಿದ್ದೇವೆ. 380 ರೂಪಾಯಿ ಇದ್ದ ಭತ್ಯೆಯನ್ನು 600 ರೂಪಾಯಿ ಹೆಚ್ಚಳ ಮಾಡಲಾಗಿದೆ. ವಿಶೇಷ ತರಬೇತಿ ವಿಭಾಗ ತೆರೆಯಬೇಕೆಂಬುದು ನಮ್ಮ ಉದ್ದೇಶವಾಗಿದೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರತ್ಯೇಕ ತರಬೇತಿ ನೀಡುತ್ತಿದ್ದೇವೆ. ಅಗ್ನಿಶಾಮಕ ಠಾಣೆ, ಕೈಗಾರಿಕೆ ಪ್ರದೇಶದಲ್ಲಿ ಪ್ರತ್ಯೇಕ ತರಬೇತಿ ನೀಡುತ್ತಿದ್ದು, ವಿಶೇಷ ತರಬೇತಿ ವಿಭಾಗ ತೆರೆಯಲಾಗುವುದು ಎಂದು ಹೇಳಿದ್ದಾರೆ.