alex Certify ಅಕ್ರಮ ನಡೆದಿಲ್ಲವೆಂದು ಸದನದಲ್ಲಿ ಹೇಳಿದಾಗ ತನಿಖೆಯೇ ನಡೆದಿರಲಿಲ್ಲ: ಡಿಕೆಶಿಗೆ ಆರಗ ಜ್ಞಾನೇಂದ್ರ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ನಡೆದಿಲ್ಲವೆಂದು ಸದನದಲ್ಲಿ ಹೇಳಿದಾಗ ತನಿಖೆಯೇ ನಡೆದಿರಲಿಲ್ಲ: ಡಿಕೆಶಿಗೆ ಆರಗ ಜ್ಞಾನೇಂದ್ರ ತಿರುಗೇಟು

ಬೆಂಗಳೂರು: ಸ್ಟ್ರಾಂಗ್ ರೂಂ ಓಪನ್ ಮಾಡಿ ಓಎಂಆರ್ ಶೀಟ್ ಗಳನ್ನು ತಿದ್ದಲಾಗಿದೆ. ಸಿಸಿಟಿವಿ ಆಫ್ ಮಾಡಿ ಓಎಂಆರ್ ಶೀಟ್ ಗಳನ್ನು ತಿದ್ದಲಾಗಿದೆ. ಹೀಗಾಗಿ ನೇಮಕಾತಿ ವಿಭಾಗದ ಹಿರಿಯ ಅಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಎಷ್ಟೇ ದೊಡ್ಡ ಮಟ್ಟದ ಅಧಿಕಾರಿಯಾಗಿದ್ದರೂ ಬಂಧಿಸಲಾಗುವುದು. ಕಾಂಗ್ರೆಸ್ ಆಡಳಿತದಲ್ಲಿ ನೇಮಕಾತಿ ಹಗರಣ ಮುಚ್ಚಿ ಹಾಕಿದ್ದರು. ಆದರೆ ನಾವು ಪಾರದರ್ಶಕವಾಗಿ ತನಿಖೆ ನಡೆಸಿ ಕ್ರಮ ಕೈಗೊಂಡಿದ್ದೇವೆ ಎಂದರು.

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಎಡಿಜಿಪಿ ಅಮೃತ್ ಪಾಲ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆರಗ ಜ್ಞಾನೇಂದ್ರ, ಪ್ರಕರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ಹೈಕೋರ್ಟ್ ಹೇಳುವ ಮೊದಲೇ ನಾವು ಕ್ರಮ ಕೈಗೊಂಡಿದ್ದೇವೆ. ವಿಚಾರಣೆ ನಡೆಸಿ ಸೂಕ್ತ ಸಾಕ್ಷಾಧಾರ ದೊರೆತ ಬಳಿಕ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿದೆ. ಅಕ್ರಮವಾಗಿ ಪರೀಕ್ಷೆ ಬರೆದವರು, ಹಣ ಪಡೆದವರನ್ನು ಕೂಡ ಬಂಧಿಸಲಾಗಿದೆ. ತನಿಖೆ ನಡೆಸಿ ಪ್ರಕರಣದ ರೂವಾರಿಯನ್ನು ಬಂಧಿಸಲಾಗಿದೆ ಎಂದರು.

ಆರಂಭದಲ್ಲಿ ಅಕ್ರಮದ ಬಗ್ಗೆ ಸೂಕ್ತವಾದ ಸಾಕ್ಷಾಧಾರಗಳು ಇರಲಿಲ್ಲ. ಹೀಗಾಗಿ ಅಕ್ರಮ ನಡೆದಿಲ್ಲವೆಂದು ಸದನದಲ್ಲಿ ಹೇಳಿದ್ದೆ. ಓಎಂಆರ್ ಶೀಟ್ ತಿದ್ದಿರುವುದು ಗೊತ್ತಾದ ಬಳಿಕ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ. ಕೂಡಲೇ ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ತನಿಖೆಗೆ ಆದೇಶ ನೀಡಲಾಗಿದೆ. ಉನ್ನತ ಅಧಿಕಾರಿಗಳ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ. ನಾನು ಸದನದಲ್ಲಿ ಹೇಳಿಕೆ ನೀಡಿದಾಗ ತನಿಖೆಯೇ ನಡೆದಿರಲಿಲ್ಲ ಎಂದರು.

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಕ್ಕೆ ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...