ಶಿವಮೊಗ್ಗ: ಮಲೆನಾಡಿನ ಗ್ರಾಮೀಣ ಪ್ರದೇಶದ ಪಡಿತರ ಚೀಟಿದಾರರು ಗ್ರಾಮ ಮಟ್ಟದಲ್ಲಿಯೇ ಪಡಿತರ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ರಿಪ್ಪನ್ ಪೇಟೆ ಸಮೀಪದ ವಡಾಹೊಸಹಳ್ಳಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಉದ್ಘಾಟಿಸಿ ಅವರು ಮಾತನಾಡಿದರು. ಮಲೆನಾಡಿನ ಗ್ರಾಮೀಣ ಪ್ರದೇಶದ ಪಡಿತರ ಚೀಟಿದಾರರು 10-12 ಕಿಲೋಮೀಟರ್ ದೂರದ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಪಡೆದುಕೊಳ್ಳಲು ಹೋಗಬೇಕಿತ್ತು. ಇದಕ್ಕಾಗಿ ನೂರಾರು ರೂಪಾಯಿ ವೆಚ್ಚ ಮಾಡಬೇಕಿತ್ತು. ಈ ಬಗ್ಗೆ ಸರ್ಕಾರದ ಗಮನ ಸೆಳೆದು ನ್ಯಾಯಬೆಲೆ ಅಂಗಡಿಗೆ ತೆರೆಯಲು ಪರವಾನಿಗೆಗೆ ಇದ್ದ ಕಠಿಣ ನಿಯಮಗಳನ್ನು ಸರಳೀಕರಣಗೊಳಿಸಲಾಗಿದೆ ಎಂದರು.
ಗ್ರಾಮೀಣ ಮಟ್ಟದಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅನುವು ಮಾಡಿಕೊಡಲಾಗಿದೆ. ಇದರಿಂದ ದೂರದ ನ್ಯಾಯಬೆಲೆ ಅಂಗಡಿಗೆ ಹೋಗುವ ಅವಶ್ಯಕತೆ ಇರುವುದಿಲ್ಲ. ಗ್ರಾಮಮಟ್ಟದಲ್ಲಿಯೇ ಪಡಿತರ ವಿತರಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.