ಬೆಂಗಳೂರು: ಅಗ್ನಿಪಥ ಯೋಜನೆಯಡಿ ಸೇನೆಯ ತರಬೇತಿ ಪಡೆದವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಾಲ್ಕು ವರ್ಷ ಸೇನೆಯಲ್ಲಿ ತರಬೇತಿ ಪಡೆದು ಬರುವ ಅಗ್ನಿವೀರ ಸೈನಿಕರಿಗೆ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳುವ ಚಿಂತನೆಯಿದೆ. ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿಯೂ ಈ ರೀತಿ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳಲಾಗಿದೆ ಎಂದರು.
ಅಗ್ನಿವೀರರನ್ನು ಪೊಲೀಸ್ ಇಲಾಖೆ ಮತ್ತು ಇತರೆ ಭದ್ರತಾ ಸಂಸ್ಥೆಗಳು ಸೇರಿದಂತೆ ಯಾವುದೇ ಸೇವೆಗಳಿಗೂ ಸೇರಿಸಿಕೊಳ್ಳಲು ಅವಕಾಶವಿದೆ. ಸೇನೆಯ ಹೊಸ ನೇಮಕಾತಿ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವುದು ಖಂಡನೀಯ. ಯುವಕರು ಕೇವಲ 5000 ರೂ.ಗೆ ವಿವಿಧ ಉದ್ಯೋಗ ಮಾಡುತ್ತಿದ್ದಾರೆ. ಈ ಯೋಜನೆಯಿಂದ ಲಕ್ಷಾಂತರ ಯುವಕರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.