
ಬೆಂಗಳೂರು: ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ವಿವಿಧ 2000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿರ್ಮಿಸುವ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಬಹು ಉಪಯೋಗಿ ಸಭಾಂಗಣ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ, ಜಯನಗರ ಅಗ್ನಿಶಾಮಕ ಠಾಣೆಯ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ವಿವಿಧ ಹುದ್ದೆಗಳಿಗೆ ಎರಡು ಸಾವಿರ ಮಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು. ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.