
ಬೆಂಗಳೂರು: ಹೈಕೋರ್ಟ್ ಮಧ್ಯಂತರ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬುಧವಾರದವರೆಗೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಶಾಲೆಗಳ ಬಳಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪೋಷಕರು ಯಾರೂ ಭಯಪಡುವುದು ಬೇಡ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.