
ಶಿವಮೊಗ್ಗ: ಶಿವಮೊಗ್ಗದಲ್ಲಿ ಶಂಕಿತ ಉಗ್ರರಿಬ್ಬರನ್ನು ಬಂಧಿಸಿ ದೊಡ್ಡ ಅನಾಹುತ ತಪ್ಪಿಸಿದ ಶಿವಮೊಗ್ಗ ಪೊಲೀಸರಿಗೆ ಬಹುಮಾನ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಂಕಿತ ಉಗ್ರರನ್ನು ಬಂಧಿಸಿ ಮುಂದೆ ನಡೆಯಬಹುದಾಗಿದ್ದ ದೊಡ್ಡ ಅನಾಹುತವನ್ನು ಶಿವಮೊಗ್ಗ ಪೊಲೀಸರು ತಪ್ಪಿಸಿದ್ದು, ಈ ಶಂಕಿತ ಉಗ್ರರಿಗೆ ಕರಾವಳಿ ಮತ್ತು ಕೇರಳದೊಂದಿಗೆ ಸಂಪರ್ಕವಿದೆ. ಇಂತಹ ಶಂಕಿತ ಉಗ್ರರ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಸಮಯದಲ್ಲಿ ಬಂಧಿಸುವ ಮೂಲಕ ದೊಡ್ಡ ಅಪಾಯ ತಪ್ಪಿಸಿದ್ದಾರೆ. ಅವರಿಗೆ ಬಹುಮಾನ ನೀಡಲಾಗುವುದು ಎಂದು ಹೇಳಿದ್ದಾರೆ.