alex Certify ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ; ಸರಿಪಡಿಸದಿದ್ದರೆ ಉಗ್ರ ಹೋರಾಟ; ಸರ್ಕಾರಕ್ಕೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ; ಸರಿಪಡಿಸದಿದ್ದರೆ ಉಗ್ರ ಹೋರಾಟ; ಸರ್ಕಾರಕ್ಕೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ


ಶಿವಮೊಗ್ಗ: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕೃಷಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ ಎಂದು ಆರೋಪಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಗ ಜ್ಞಾನೇಂದ್ರ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕೃಷಿ ಸಮ್ಮಾನ್ ಯೋಜನೆ ತೆಗೆದಿದ್ದಾರೆ. ಕೃಷಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ಬಳಸಿದ್ದಾರೆ ಎಂದರು.

ಸರ್ಕಾರ ರೈತರ ಶಾಪಕ್ಕೆ ಗುರಿಯಾಗಲಿದೆ. ತಕ್ಷಣ ಇದನ್ನು ಸರಿಪಡಿಸದಿದ್ದರೆ ಉಗ್ರ ಹೋರಾಟ ಮಡುತ್ತೇವೆ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದಲ್ಲಿ ವರ್ಗಾವಣೆ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಕಾರಕ್ಕೆ ರಾಜ್ಯದ ಜನ ಶಾಪ ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...