ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಅಚ್ಚರಿ ಬೆಳವಣಿಗೆ ನಡೆದಿದೆ. ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಹೈಕಮಾಂಡ್ ನಿಂದ ಬಿ ಮತ್ತು ಸಿ ಫಾರಂ ಗಳನ್ನು ಇಮೇಲ್ ಮೂಲಕ ಕಳುಹಿಸಲಾಗಿದೆ.
ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಟಿ. ಕೃಷ್ಣೇಗೌಡ ಅವರು ಬಿಜೆಪಿಯಿಂದ ಬಿ ಮತ್ತು ಸಿ ಫಾರಂ ಪಡೆದುಕೊಂಡಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯೋಗಾರಮೇಶ್ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಎಂ.ಟಿ. ಕೃಷ್ಣೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ವತಿಯಿಂದ ಎಂ.ಟಿ. ಕೃಷ್ಣೇಗೌಡರಿಗೆ ಬಿಜೆಪಿ ಬಿ ಮತ್ತು ಸಿ ಫಾರಂ ನೀಡಲಾಗಿದ್ದು, ಅವರೇ ಪಕ್ಷದ ಅಧಿಕೃತ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿದೆ. ಏಪ್ರಿಲ್ 21 ರ ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಯೋಗಾರಮೇಶ್ ಅವರ ನಾಮಪತ್ರ ತಿರಸ್ಕೃತವಾದಲ್ಲಿ ಕೃಷ್ಣೇಗೌಡ ಅಧಿಕೃತವಾಗಿ ಬಿಜೆಪಿ ಅಭ್ಯರ್ಥಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.