alex Certify ಬಿಜೆಪಿಯಿಂದ ಸಿಗದ ಬಿ ಫಾರಂ; ನಾಮಪತ್ರ ತಿರಸ್ಕೃತ; ಪಕ್ಷೇತರ ಸ್ಪರ್ಧೆಗೆ ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯಿಂದ ಸಿಗದ ಬಿ ಫಾರಂ; ನಾಮಪತ್ರ ತಿರಸ್ಕೃತ; ಪಕ್ಷೇತರ ಸ್ಪರ್ಧೆಗೆ ಗ್ರೀನ್ ಸಿಗ್ನಲ್

ಹಾಸನ: ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದ ಅಭ್ಯರ್ಥಿ ಕೃಷ್ಣೇಗೌಡ ಅವರ ನಾಮಪತ್ರ ತಿರಸ್ಕೃತವಾಗಿದೆ. ಅರಕಲಗೂಡು ಕ್ಷೇತ್ರದ ಅಭ್ಯರ್ಥಿ ಕೃಷ್ಣೇಗೌಡ ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿ ಎಂದು ನಾಮಪತ್ರ ಸಲ್ಲಿಸಿದ್ದರು.

ಬಿಜೆಪಿಯಿಂದ ಬಿ ಫಾರಂ ಸಿಗದ ಕಾರಣ ನಾಮಪತ್ರ ತಿರಸ್ಕಾರಗೊಂಡಿದೆ. ಅಧಿಕೃತವಾಗಿ ಯೋಗಾ ರಮೇಶ್ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದರು.

ನಂತರದಲ್ಲಿ ಕೃಷ್ಣೇಗೌಡರಿಗೆ ಇಮೇಲ್ ಮೂಲಕ ಬಿ ಫಾರಂ ಕಳಿಸಲಾಗಿದೆ. ಅಧಿಕೃತ ಅಭ್ಯರ್ಥಿ ಬದಲು ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಬಿ, ಸಿ ಫಾರಂ ನೀಡಿದೆ ಎನ್ನಲಾಗಿತ್ತು.

ಕೃಷ್ಣೇಗೌಡ ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...