
ಬೆಂಗಳೂರು: ಶೀಘ್ರವೇ ಅರಳಿಕಟ್ಟೆ ನ್ಯಾಯ ಪಂಚಾಯಿತಿ ಪದ್ಧತಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಜನತೆಗೆ ಗ್ರಾಮೀಣ ಮಟ್ಟದಲ್ಲಿಯೇ ನ್ಯಾಯ ದೊರಕಿಸಿಕೊಡಲು ನೂತನ ನ್ಯಾಯ ನೀತಿ ರೂಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಹಿಂದಿನಿಂದಲೂ ನಡೆದುಕೊಂಡು ಬಂದಿದ್ದ ಅರಳಿಕಟ್ಟೆ ನ್ಯಾಯ ಪಂಚಾಯಿತಿ ಪದ್ಧತಿ ಅನುಷ್ಠಾನಕ್ಕೆ ನಿರ್ಧರಿಸಿದ್ದು, ಇದಕ್ಕಾಗಿ ನಿಯಮ ರೂಪಿಸಲಾಗುತ್ತಿದೆ. ತಾಲೂಕು ಮಟ್ಟದ ನ್ಯಾಯಾಧೀಶರು ಸ್ಥಳೀಯ ನ್ಯಾಯ ಪಂಚಾಯಿತಿಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಅರಳಿಕಟ್ಟೆ ನ್ಯಾಯ ಪಂಚಾಯತಿ ಪದ್ಧತಿ ಶೀಘ್ರವೇ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.