ಬೆಂಗಳೂರು : ಹೆಸರಿನಲ್ಲಿ ‘ರಾಮ’ ಇದ್ದರೆ ಸಾಲದು, ನಿಮ್ಮಲ್ಲಿ ರಾಮನ ನಡವಳಿಕೆ ಇರಬೇಕು ಎಂದು ಸಿಎಂ ಸಿದ್ಧರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಕುಮಾರಸ್ವಾಮಿ ಮಂಡ್ಯದಲ್ಲಿ ನಡೆದಿರುವ ಲಾಠಿ ಚಾರ್ಜ್ ಸರ್ಕಾರದ ರಾಕ್ಷಸಿ ಪ್ರವೃತ್ತಿ ತೋರಿಸುತ್ತದೆ, ನಿಮಗಿಂತ ಹೆಚ್ಚು ರಾಷ್ಟ್ರಧ್ವಜ ಮತ್ತು ನಾಡಧ್ವಜದ ಮೇಲೆ ನಮಗೆ ಗೌರವವಿದೆ. ಯಾವಾನೋ ಹೇಳುತ್ತಾನೆ ಅಂತಾ ಹೇಗೆ ಬೇಕೋ ಹಾಗೇ ಕೆಲಸ ಮಾಡುವುದನ್ನು ನಾವು ಒಪ್ಪಲ್ಲ ಎಂದರು. ಹೆಸರಿನಲ್ಲಿ ರಾಮನಿದ್ರೆ ಸಾಲದು, ನಡತೆಯಲ್ಲಿ ಕೂಡ ‘ಶ್ರೀರಾಮ’ನಂತೆ ಇರಬೇಕು ಎಂದು ಸಿಎಂ ಸಿದ್ಧರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.