ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಪುರಲೇಹಳ್ಳಿ ಗ್ರಾಮದಲ್ಲಿ ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಧಾನಿ ಮೋದಿ ಮಾಸ್ಕ್ ಹಾಕಿಲ್ಲ. ಆದರೆ, ಬೇರೆಯವರಿಗೆ ಮಾಸ್ಕ್ ಹಾಕಿ ಎಂದು ಹೇಳುತ್ತಾರೆ ಎನ್ನುವ ಮೂಲಕ ಯುವಕ ಅವಮಾನ ಮಾಡಿದ್ದಾನೆ. ಮೋದಿಯವರ ಮಾಸ್ಕ್ ಸಂದೇಶದ ಫೋಟೋ ಬಳಿ ಯುವಕನಿಗೆ ಪ್ರಚೋದನೆ ನೀಡಿ ಪ್ರಧಾನಿಯವರಿಗೆ ಅವಮಾನಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದನ್ನು ಗಮನಿಸಿದ ಬಿಜೆಪಿ ಮುಖಂಡರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ವಶಕ್ಕೆ ಪಡೆದ ಅರಸೀಕೆರೆ ಗ್ರಾಮಾಂತರ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.