alex Certify ಮಹತ್ವದ ಬೆಳವಣಿಗೆ: RSS ನಾಯಕರ ಭೇಟಿ ಮಾಡಿದ ಬಿಜೆಪಿ ಶಾಸಕ ಬೆಲ್ಲದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹತ್ವದ ಬೆಳವಣಿಗೆ: RSS ನಾಯಕರ ಭೇಟಿ ಮಾಡಿದ ಬಿಜೆಪಿ ಶಾಸಕ ಬೆಲ್ಲದ

ನವದೆಹಲಿ: ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ತೆರೆಮರೆಯ ಚಟುವಟಿಕೆ ಮುಂದುವರೆದಿದ್ದು, ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ದೆಹಲಿಯಲ್ಲಿ ಆರ್.ಎಸ್.ಎಸ್. ನಾಯಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆನ್ನಲಾಗಿದೆ.

ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ತೆರಳುವುದಾಗಿ ಹೇಳಿದ್ದ ಅರವಿಂದ ಬೆಲ್ಲದ ಆರ್.ಎಸ್.ಎಸ್. ನಾಯಕರನ್ನು ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ದೆಹಲಿ ಭೇಟಿಯ ವೇಳೆ ಮೊದಲು ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರೊಂದಿಗೆ ಸಮಾಲೋಚನೆ ನಡೆಸಲು ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಅವರೊಂದಿಗೆ ಮತ್ತೊಬ್ಬ ನಾಯಕರನ್ನು ಕಳುಹಿಸುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...