ಹುಬ್ಬಳ್ಳಿ: 5 ಕೆಜಿ ಅಕ್ಕಿ ಬದಲು ಕೇಂದ್ರ ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಿ. ಆಗ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಜನರಿಗೆ ಗೊತ್ತಾಗುತ್ತೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೀಡುತ್ತಿರುವ 5 ಕೆಜಿ ಅಕ್ಕಿಯಲ್ಲಿ ರಾಜ್ಯ ಸರ್ಕಾರ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 5 ಕೆಜಿ ಅಕ್ಕಿ ನೀಡುವ ಬದಲು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಬೇಕು. ಆಗ ಯಾರು ಎಷ್ಟು ಅಕ್ಕಿ ಕೊಡುತ್ತಾರೆ ಎಂದು ಜನರಿಗೆ ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.
ಜನ ಅಕ್ಕಿಯನ್ನು ಮಾತ್ರ ತಿನ್ನುವುದಿಲ್ಲ. ಕೇಂದ್ರ ಸರ್ಕಾರ ಅರ್ಹ ಫಲಾನುಭವಿಗಳ ಖಾತೆಗೆ ಹಣ ಹಾಕಿದಲ್ಲಿ ಫಲಾನುಭವಿಗಳು ಅಗತ್ಯವಿರುವ ಜೋಳ, ರಾಗಿಗಳಂತಹ ಧಾನ್ಯ ಖರೀದಿಸುತ್ತಾರೆ. ಆಗ ಕಾಂಗ್ರೆಸ್ ಗ್ಯಾರಂಟಿ ಯೋಜನೆಯಡಿ ಎಷ್ಟು ಅಕ್ಕಿ ಕೊಡುತ್ತಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.