ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ರಾಜ್ಯ ಸರ್ಕಾರದಿಂದ ನೂತನ ಎಇಓ ನೇಮಕ ಮಾಡಲಾಗಿದ್ದು, ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಅವರ ಹೆಸರು ಯೇಸುರಾಜ್ ಎಂಬ ಕಾರಣಕ್ಕೆ ಅವರು ಕ್ರಿಶ್ಚಿಯನ್ ಸಮುದಾಯದವರು ಎಂಬ ಈ ಸುಳ್ಳು ಸುದ್ದಿ ಹರಿದಾಡುತ್ತಿದ್ದು ಆದರೆ ಅವರು ಹಿಂದು ಆಗಿದ್ದಾರೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರೂ ಸಹ ಈ ಕುರಿತು ಸೋಶಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿಯ ಮತ್ತೊಂದು ಫೇಕ್ ವಾಟ್ಸಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ.
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಯೇಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ.
ಇದು BJP Karnatakaದ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್ ಯುನಿವರ್ಸಿಟಿ ಆಟವಾಗಿದೆ.
ಅವರು ಹಿಂದುಳಿದ ಜಾತಿಗೆ ಸೇರಿದವರಾಗಿದ್ದು, ದಾಖಲೆಗಳು ಇಲ್ಲಿವೆ.
ರಾಜ್ಯದಲ್ಲಿ ಇನ್ನೊಂದು ಹಂತದ ಚುನಾವಣೆ ಹತ್ತಿರ ಇರೋದರಿಂದ ಜನರನ್ನು ದಾರಿ ತಪ್ಪಿಸಿ ಅವರ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಭಯ ಶುರುವಾಗಿರುವುದು ಸ್ಪಷ್ಟ ಎಂದು ಹೇಳಿದ್ದಾರೆ.