
ಇಂದು ರಾಷ್ಟ್ರೀಯ ಡೆಂಘಿ ದಿನವಾಗಿದ್ದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯ ಸುರಕ್ಷತೆಗಾಗಿ ಕೆಲವೊಂದು ಮುನ್ನೆಚ್ಚರಿಕೆಗಳನ್ನು ನೀಡಲಾಗಿದೆ.
ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು.
ಶಂಕಿತ ಡೆಂಘಿ ಜ್ವರ ಪ್ರಕರಣಗಳ ಪರೀಕ್ಷೆ ಹಾಗೂ ಚಿಕಿತ್ಸೆಯು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ. ಡೆಂಘಿ ಬಗ್ಗೆ ಭಯ ಬೇಡ ಆದರೆ ಎಚ್ಚರಿಕೆಯಿರಲಿ.
