alex Certify ಅಡಿಕೆ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಆಡಕೆಯಿಂದ ಕ್ಯಾನ್ಸರ್ ಗೆ ಔಷಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಡಿಕೆ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಆಡಕೆಯಿಂದ ಕ್ಯಾನ್ಸರ್ ಗೆ ಔಷಧ

ಬೆಂಗಳೂರು: ಅಡಕೆಯಿಂದ ಕ್ಯಾನ್ಸರ್ ಗೆ ಔಷಧಿ ತಯಾರಿಸಬಹುದಾಗಿದೆ ಎಂದು ಎಂ.ಎಸ್. ರಾಮಯ್ಯ ತಾಂತ್ರಿಕ ವಿವಿ ವರದಿ ಸಲ್ಲಿಸಿದೆ.

ಆಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ. ಇದರಿಂದ ಕ್ಯಾನ್ಸರ್ ನಿವಾರಕ ಔಷಧಿ ತಯಾರಿಸಬಹುದಾಗಿದೆ ಎಂದು ಹೇಳಿದ್ದು, ಇದು ಅಡಿಕೆ ಬೆಳೆಗಾರರಲ್ಲಿ ಸಂತಸ ತಂದಿದೆ ಎಂದು ಅಡಿಕೆ ಕಾರ್ಯಪಡೆ ಅಧ್ಯಕ್ಷರಾಗಿರುವ ಗೃಹ ಸಚಿವ ಆರೋಗ್ಯ ಜ್ಞಾನೇಂದ್ರ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಕೆ. ಪ್ರತಾಪಸಿಂಹ ನಾಯಕ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಸಚಿವರು, ಕೇಂದ್ರದ ಈ ಹಿಂದಿನ ಸರ್ಕಾರ ಅಡಿಕೆ ಕ್ಯಾನ್ಸರ್ ಕಾರಕ ಎಂದು ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿದ್ದು, ಅಡಿಕೆ ಬೆಳೆಗಾರರ ಮೇಲೆ ತೂಗು ಕತ್ತಿ ನೇತಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಅಡಕೆ ಕುರಿತು ಸಂಶೋಧನೆ ಮತ್ತು ಕ್ಲಿನಿಕಲ್ ಟ್ರಯಲ್ ಕೈಗೊಳ್ಳಲು ಎಂ.ಎಸ್. ರಾಮಯ್ಯ ಸಂಸ್ಥೆಗೆ ಹೊಣೆ ವಹಿಸಲಾಗಿತ್ತು. ಆ ಸಂಸ್ಥೆಯಿಂದ ವರದಿ ಬಂದಿದ್ದು, ಅಡಿಕೆಯಲ್ಲಿ ಯಾವುದೇ ಕ್ಯಾನ್ಸರ್ ಕಾರಕ ಅಂಶಗಳು ಇಲ್ಲವೆಂದು ಸ್ಪಷ್ಟಪಡಿಸಿದೆ. ಕೆನಡಾದ ವಿಜ್ಞಾನಿಯೊಬ್ಬರು ಅಡಕೆಯಿಂದ ಒಡೆಯಲು ಸಾಧ್ಯವಾಗದ ಗಾಜು ತಯಾರಿಸಬಹುದೆಂದು ಹೇಳಿದ್ದು, ಇಂತಹ ಗಾಜುಗಳನ್ನು ಯೋಧರಿಗೆ ಒದಗಿಸಬಹುದಾಗಿದೆ. ಅಡಕೆ ಕಾರ್ಯಪಡೆಯಿಂದ ಈ ಬಗ್ಗೆ ಸಂಶೋಧನೆ ನಡೆಸಲು ಆ ವಿಜ್ಞಾನಿಗೆ ಹಣ ನೀಡಲಾಗುತ್ತಿದೆ ಎಂದರು.

ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ 42,504 ಹೆಕ್ಟೇರ್ ನಲ್ಲಿ ಅಡಕೆ ಬೆಳೆಗೆ ಎಲೆ ಚುಕ್ಕಿ ರೋಗ ತಗುಲಿದೆ. ಇದರಿಂದ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ರೈತರಿಗೆ ಸಸ್ಯ ಸಂರಕ್ಷಣೆ ಔಷಧಿ ಖರೀದಿಗೆ ಹೆಕ್ಟೇರ್ ಗೆ 4000 ರೂ. ಸಹಾಯಧನ ನೀಡಲಾಗಿದೆ. ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...