ಸೆ. 10ಕ್ಕೆ `ಸಶಸ್ತ್ರ ಪೇದೆ’ ಹುದ್ದೆ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಸೆಪ್ಟೆಂಬರ್ 10 ರಂದು ಪರೀಕ್ಷೆ ನಡೆಯಲಿದ್ದು,  ಅಭ್ಯರ್ಥಿಗಳು ಇಲಾಕೆಯ ಅಧಿಕೃತ ವೆಬ್ ಸೈಟ್ https://ksp.karnataka.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.

 ಸೆಪ್ಟೆಂಬರ್ 10 ರಂದು ಬೆಂಗಳೂರು ನಗರದ 41 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ 20,560 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಎದುರಿಸಲಿದ್ದಾರೆ. ಈಗಾಗಲೇ ಅಭ್ಯರ್ಥಿಗಳ ಮಾಹಿತಿಯನ್ನು ಇಲಾಖಾ ಜಾಲತಾಣದಲ್ಲಿ ಬಿಡುಗಡೆಗೊಳಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಪ್ರವೇಶಪತ್ರವನ್ನು ಈ ಜಾಲತಾಣದ ಮೂಲಕ ಡೌನ್ ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ಕೋರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read