ಚೆನ್ನೈ: ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಜನರನ್ನು ಬಲಿಪಡೆದ MI-17V5 ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೆಲಿಕಾಪ್ಟರ್ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.
ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ನಿನ್ನೆ ತಮಿಳುನಾಡಿದ ಕುನೂರು ಬಳಿ ಪತನಗೊಂಡಿತ್ತು. ದುರಂತದಲ್ಲಿ ಬಿಪಿನ್ ರಾವತ್ ಸೇರಿದಂತೆ 13 ಜನರು ಮೃತಪಟ್ಟಿದ್ದರು. ಹೆಲಿಕಾಪ್ಟರ್ ಪೈಲಟ್ ವರುಣ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದು, ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಗಳ ಸಾವು; ಸೆಲ್ಫಿ ವಿಡಿಯೋ ಮಾಡಿ ಅಳಿಯನ ಮನೆ ಮುಂದೆ ಆತ್ಮಹತ್ಯೆಗೆ ಶರಣಾದ ತಂದೆ
ಹೆಲಿಕಾಪ್ಟರ್ ದುರಂತ ಬಗ್ಗೆ ಐಎಎಫ್ ತನಿಖೆಗೆ ಆದೇಶಿಸಿದ್ದು, ವಾಯುಸೇನೆಯ ತನಿಖಾ ತಂಡದಿದ್ದ ಘಟನಾ ಸ್ಥಳದಲ್ಲಿ ಶೋಧ ಕಾರ್ಯ ನಡೆದಿದೆ. ಈ ವೇಳೆ ಹೆಲಿಕಾಪ್ಟರ್ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ಪತ್ತೆಯಾಗಿರುವ ಬ್ಲ್ಯಾಕ್ ಬಾಕ್ಸ್ ನಿಂದ ಹೆಲಿಕಾಪ್ಟರ್ ಪತನಗೊಳ್ಳಲು ಕಾರಣವೇನು ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ.