
ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ನಡೆದಿದೆ.
ಸಿಯಾಂಗ್ ಜಿಲ್ಲೆಯ ಸಿಂಗಿಂಗ್ ಬಳಿ ಹೆಲಿಕಾಪ್ಟರ್ ಪತನಗೊಂಡಿದ್ದು, ರಕ್ಷಣಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸೇನಾಪಡೆಯ ಸುಧಾರಿತ ಲಘು ಹೆಲಿಕಾಪ್ಟರ್ ಇದಾಗಿದೆ.
ಟುಟಿಂಗ್ ಹೆಡ್ ಕ್ವಾಟರ್ಸ್ ನಿಂದ 25 ಕಿ.ಮೀ ದೂರದಲ್ಲಿ ಈ ದುರಂತ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.