
ಕೋಲಾರ: ತಾಂತ್ರಿಕ ದೋಷದಿಂದಾಗಿ ಸೇನಾ ಹೆಲಿಕಾಪ್ಟರ್ ವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿಯಲ್ಲಿ ನಡೆದಿದೆ.
ಡಿ.ಕೆ.ಹಳ್ಳಿ ಗ್ರಾಮದ ಕೆರೆಯ ಅಂಗಳದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಹೆಲಿಕಾಪ್ಟರ್ ನಲ್ಲಿದ್ದ ಅಧಿಕಾರಿಗಳು ಅಪಾಯದಿಂದ ಪಾರಾಗಿದ್ದಾರೆ.
ತರಬೇತಿ ನಿಮಿತ್ತ ಸೇನಾ ಹೆಲಿಕಾಪ್ಟರ್ ಕೆಜಿಎಫ್-ಬಂಗಾರಪೇಟೆಯಲ್ಲಿ ಹಾರಾಟ ನಡೆಸುತ್ತಿತ್ತು. ಈ ವೇಳೆ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.