ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಭದ್ರತಾಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ಸಂದರ್ಭದಲ್ಲಿ ಸೇನಾಧಿಕಾರಿ ಹಾಗೂ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಪೂಂಛ್ –ರಜೌರಿ ಅರಣ್ಯ ವಲಯದಲ್ಲಿ ಘಟನೆ ನಡೆದಿದೆ. ಅರಣ್ಯಪ್ರದೇಶದಲ್ಲಿ ಭಯೋತ್ಪಾದಕರು ಅವಿತಿರುವ ಮಾಹಿತಿ ತಿಳಿದ ಭದ್ರತಾಪಡೆಗಳು ಉಗ್ರರನ್ನು ಸದೆಬಡಿಯಲು ಕಾರ್ಯಾಚರಣೆ ಕೈಗೊಂಡಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನಾಧಿಕಾರಿ, ಯೋಧರು ಮೃತಪಟ್ಟಿದ್ದಾರೆ.
ಮೆಂಧರ್ ಉಪ ವಿಭಾಗದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಒಬ್ಬರು ಜೆಸಿಒ, ಒಬ್ಬ ಸೈನಿಕ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯ ಯೋಧರನ್ನು ರವಾನಿಸಲಾಗಿದ್ದು, ಉಗ್ರರ ಸದೆಬಡಿಯಲು ಕಾರ್ಯಾಚರಣೆ ಮುಂದುವರೆಸಲಾಗಿದೆ.