ಕಲಬುರಗಿ: ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯಿಂದ 2021ರ ಫೆಬ್ರವರಿ 4 ರಿಂದ 15 ರವರೆಗೆ ಬೆಳಗಾವಿಯ ವಿ.ಟಿ.ಯು.(ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ) ಮೈದಾನದಲ್ಲಿ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. ಈ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟೆಕ್ನಿಕಲ್(ಎವಿಯೇಶನ್/ಅಮ್ಯುನೀಶನ್), ಸೋಲ್ಜರ್ ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್, ಸೋಲ್ಜರ್ ಟ್ರೇಡ್ಸ್‍ಮನ್(10ನೇ), ಸೋಲ್ಜರ್ ಟ್ರೇಡ್ಸ್‍ಮನ್(8ನೇ), ಸೋಲ್ಜರ್ ನರ್ಸಿಂಗ್ ಅಸಿಸ್ಟಂಟ್/ ನರ್ಸಿಂಗ್ ಅಸಿಸ್ಟಂಟ್ ವೆಟರ್ನರಿ ಹುದ್ದೆಗಳಿಗೆ ನೇಮಕಾತಿ ರ್ಯಾಲಿ ನಡೆಯಲಿದೆ.
ಈಗಾಗಲೇ www.joinindianarmy.nic.in ವೆಬ್‍ಸೈಟ್‍ನಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಅಭ್ಯರ್ಥಿಗಳು ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು 2021ರ ಜನವರಿ 18 ಕೊನೆಯ ದಿನವಾಗಿದೆ. ಈ ಸೇನಾ ಭರ್ತಿ ರ್ಯಾಲಿಯಲ್ಲಿ ಬೆಳಗಾವಿ, ರಾಯಚೂರು, ಯಾದಗಿರಿ, ಬೀದರ, ಕೊಪ್ಪಳ ಹಾಗೂ ಕಲಬುರಗಿ ಜಿಲ್ಲೆಗಳ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ನೋಂದಣಿಯಾದ ಅಭ್ಯರ್ಥಿಗಳು ವೆಬ್‍ಸೈಟ್‍ದಿಂದ ಪ್ರವೇಶಪತ್ರ ಪಡೆಯಬೇಕು. ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಅವಶ್ಯಕ ದಾಖಲಾತಿಗಳು, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾನದಂಡಗಳ ವಿವರಗಳಿಗಾಗಿ www.joinindianarmy.nic.in ವೆಬ್‍ಸೈಟ್‍ಗೆ ಸಂಪರ್ಕಿಸಲು ಕೋರಲಾಗಿದೆ.