alex Certify ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್: ಮೇ 7 ರಿಂದ 12 ವರೆಗೆ ಸೇನಾ ನೇಮಕಾತಿ ರ್ಯಾಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್: ಮೇ 7 ರಿಂದ 12 ವರೆಗೆ ಸೇನಾ ನೇಮಕಾತಿ ರ್ಯಾಲಿ

ಮಡಿಕೇರಿ: ಭೂಸೇನಾ ಭರ್ತಿ ಕಾರ್ಯಾಲಯ, ಬೆಂಗಳೂರು ಇವರ ವತಿಯಿಂದ 2021 ರ ಮೇ 7 ರಿಂದ 12 ರವರೆಗೆ ಕೋಲಾರದ ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ಸೋಲ್ಡಿಯರ್ ಜನರಲ್ ಡ್ಯೂಟಿ, ಟೆಕ್ನಿಕಲ್, ಟ್ರೇಡ್ಸ್ ಮ್ಯಾನ್, ಲಿಪಿಕ್, ಸ್ಟೋರ್ ಕೀಪರ್ ಟೆಕ್ನಿಕಲ್ ಹಾಗೂ ನರ್ಸಿಂಗ್ ಅಸಿಸ್ಟೆಂಟ್‍ಗಳಿಗೆ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ.

ಅರ್ಹ ಪುರುಷ ಅಭ್ಯರ್ಥಿಗಳು ಏಪ್ರಿಲ್, 26 ರವರೆಗೆ ಜಾಲತಾಣದಲ್ಲಿ ಅರ್ಜಿಗಳನ್ನು ನೋಂದಾಯಿಸಬಹುದು. ಸಾಮಾನ್ಯ ಅಭ್ಯರ್ಥಿಗಳು, ಮಾಜಿ ಸೈನಿಕರ ಮಕ್ಕಳು, ಯುದ್ಧ/ ಯುದ್ಧದಂತಹ ಕಾರ್ಯಾಚರಣೆಯಲ್ಲಿ ಮಡಿದ ಯೋಧರ ಮಕ್ಕಳು, ಎನ್‍ಸಿಸಿ ಹಾಗೂ ಕ್ರೀಡಾಪಟುಗಳಿಗೆ ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ ಜಾಲತಾಣ www.joinindianarmy.nic.in ಹಾಗೂ ದೂ.ಸಂಖ್ಯೆ 080 25596517 ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...