alex Certify 10 ನೇ ತರಗತಿ ಪಾಸಾದ ಸೇನೆ ಸೇರಬಯಸುವ ಯುವಕರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

10 ನೇ ತರಗತಿ ಪಾಸಾದ ಸೇನೆ ಸೇರಬಯಸುವ ಯುವಕರಿಗೆ ಇಲ್ಲಿದೆ ಗುಡ್ ನ್ಯೂಸ್

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಾಮಾನ್ಯ ಅರ್ಹತೆಗಳು:

ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ-(ಪ್ರವರ್ಗ-1ಕ್ಕೆ 2.50 ಲಕ್ಷ ರೂ. ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ಗಳಿಗೆ 1 ಲಕ್ಷ ರೂ.

ಕನಿಷ್ಠ ವಿದ್ಯಾರ್ಹತೆ: ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.

ವಯೋಮಿತಿ: ಅಕ್ಟೋಬರ್ 1, 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು(ಅಭ್ಯರ್ಥಿಯು 01 Oct 2000 ರಿಂದ 01 Apr 2005{ 17 1/2 22)ರ ದಿನಾಂಕಗಳ ನಡುವೆ ಜನಿಸಿರಬೇಕು).

ತರಬೇತಿ ನೀಡುವ ಸ್ಥಳಗಳು: ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ನೀಡಲಾಗುವುದು ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 30ನೇ ಜುಲೈ 2022 ಆಗಿರುತ್ತದೆ.

ಸಹಾಯವಾಣಿ:(ಸಮಯ ಬೆಳಗ್ಗೆ 10.00ರಿಂದ ಸಂಜೆ 5.30ರವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ) ದಕ್ಷಿಣ ಕನ್ನಡ: 0824-2225078, ಉಡುಪಿ ಜಿಲ್ಲೆ: 0820-2574881, ಉತ್ತರ ಕನ್ನಡ ಜಿಲ್ಲೆ: 08382-226589, ಕೇಂದ್ರ ಕಚೇರಿ: 0850770004. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ https://bcwd.karnataka.gov.in ವೆಬ್ ಸೈಟ್ ನಿಂದ ಪಡೆಯಬಹುದು ಎಂದು ಚಿಕ್ಕಬಳ್ಳಾಪುರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...