ಬೆಂಗಳೂರು: ಮಹಾನಗರ ಪಾಲಿಕೆ ಸಿಬ್ಬಂದಿಗಳಿಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಸೆ. 14 ರಂದು ರಾಜ್ಯದ 10 ಮಹಾನಗರ ಪಾಲಿಕೆಗಳನ್ನು ಬಂದ್ ಮಾಡಲಾಗುವುದು.
ಕರ್ತವ್ಯ ಬಹಿಷ್ಕರಿಸಿ ಮಹಾನಗರ ಪಾಲಿಕೆಯ ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರಿ ನೌಕರರು ಮತ್ತು ಕುಟುಂಬದವರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ ಪಾಲಿಕೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಜಾರಿಗೊಳಿಸಿಲ್ಲ.
ಮಹಾನಗರ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿ, ಪೌರಕಾರ್ಮಿಕರಿಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮುಷ್ಕರ ಕೈಗೊಳ್ಳಲಾಗಿದೆ. ಮೈಸೂರು, ಮಂಗಳೂರು, ಹುಬ್ಬಳ್ಳಿ –ಧಾರವಾಡ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ವಿಜಯಪುರ, ಕಲಬುರಗಿ, ತುಮಕೂರು ಮಹಾನಗರ ಪಾಲಿಕೆಗಳ ಸಿಬ್ಬಂದಿ ಸೆಪ್ಟೆಂಬರ್ 14ರಂದು ಕರ್ತವ್ಯ ಬಹಿಷ್ಕರಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸಲಿದ್ದಾರೆ.