alex Certify ಅಶ್ಲೀಲ ವಿಡಿಯೋ ಕಳಿಸಿ ಸೆಕ್ಸ್ ಗೆ ಒತ್ತಾಯಿಸಿ ಸಿಕ್ಕಿಬಿದ್ದ ವಿದ್ಯಾರ್ಥಿ: ಗಗನಸಖಿ ತರಬೇತಿನಿರತ ಯುವತಿಗೆ ಕಿರುಕುಳ ನೀಡಿದ ಕಿಡಿಗೇಡಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಶ್ಲೀಲ ವಿಡಿಯೋ ಕಳಿಸಿ ಸೆಕ್ಸ್ ಗೆ ಒತ್ತಾಯಿಸಿ ಸಿಕ್ಕಿಬಿದ್ದ ವಿದ್ಯಾರ್ಥಿ: ಗಗನಸಖಿ ತರಬೇತಿನಿರತ ಯುವತಿಗೆ ಕಿರುಕುಳ ನೀಡಿದ ಕಿಡಿಗೇಡಿ ಅರೆಸ್ಟ್

ನವದೆಹಲಿ: ಗಗನಸಖಿ ತರಬೇತಿ ಪಡೆಯುತ್ತಿರುವ ಯುವತಿಯನ್ನು ಪರಿಚಯಿಸಿಕೊಂಡು ಲೈಂಗಿಕ ಕ್ರಿಯೆ ನಡೆಸುವಂತೆ ನಿರಂತರವಾಗಿ ಬಲವಂತ ಮಾಡುತ್ತಿದ್ದ 12 ನೇ ತರಗತಿ ವಿದ್ಯಾರ್ಥಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ ಕೃಷ್ಣನಗರ ನಿವಾಸಿಯಾಗಿರುವ ಆರೋಪಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಮೂಲಕ ಯುವತಿಯನ್ನು ಪರಿಚಯಿಸಿಕೊಂಡು ಲೈಂಗಿಕ ಕ್ರಿಯೆ ನಡೆಸುವಂತೆ ಕಿರುಕುಳ ನೀಡಿದ್ದಾನೆ. ಜಗತ್ ಪುರಿ ಠಾಣೆ ಪೊಲೀಸರು ಯುವತಿ ನೀಡಿದ ದೂರು ಆಧರಿಸಿ ತನಿಖೆ ಕೈಗೊಂಡಿದ್ದು, ಸೈಬರ್ ಕ್ರೈಮ್ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಯುವತಿ ದೂರು ನೀಡಿದ 5 ಗಂಟೆಯೊಳಗೆ ಆರೋಪಿ ವಿದ್ಯಾರ್ಥಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಯುವತಿಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಿದ್ದ ಆರೋಗ್ಯಪಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯ ಮಾಡುತ್ತಿದ್ದ. ಈತನ ಕಿರುಕುಳದಿಂದ ಬೇಸತ್ತ ಯುವತಿ ದೂರು ನೀಡಿದ್ದಳು. ಆತನ ಮೊಬೈಲ್ ಟ್ರೇಸ್ ಮಾಡಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...