alex Certify ಶ್ರೀ ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀ ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು ವಶಕ್ಕೆ

ಕೋಲಾರ: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳಿಂದ ಅಳವಡಿಸಿದ್ದ ಶ್ರೀ ರಾಮನ ಬ್ಯಾನರ್ ಅನ್ನು ದುಷ್ಕರ್ಮಿಗಳು ಹರಿದು ಹಾಕಿದ ಘಟನೆ ಮುಳಬಾಗಿಲು ಪಟ್ಟಣದ ಗುಣಿಗಂಟೆ ಪಾಳ್ಯದಲ್ಲಿ ನಡೆದಿದೆ.

ಮಂಗಳವಾರ ತಡರಾತ್ರಿ ಶ್ರೀ ರಾಮನ ಬ್ಯಾನರ್ ಮತ್ತು ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಹರಿದು ಹಾಕಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ಇದರಿಂದಾಗಿ ಕೆಲ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಇಬ್ಬರು ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಜಾಹಿರ್ ಎಂದು ಗುರುತಿಸಲಾಗಿದೆ.

ಬ್ಯಾನರ್ ಹರಿದು ಹಾಕಿದ ವಿಷಯ ತಿಳಿದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು, ಸಂಸದ ಎಸ್. ಮುನಿಸ್ವಾಮಿ, ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಪ್ರತಿಭಟನೆ ನಡೆಸಿದ್ದಾರೆ. ಹರಿದ ಬ್ಯಾನರ್, ಫ್ಲೆಕ್ಸ್ ಗಳನ್ನು ತೆರೆವುಗೊಳಿಸಿ ಹೊಸ ಬ್ಯಾನರ್ ಅಳವಡಿಸಲಾಗಿದೆ. ಹಿಂದೂಪರ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...