ಚಾಮರಾಜನಗರ: ಚಾಮರಾಜನಗರದ ಮಹದೇಶ್ವರ ಡಯಾಗ್ನೋಸ್ಟಿಕ್ ಲ್ಯಾಬ್ ಟೆಕ್ನಿಷಿಯನ್ ಶಿವಕುಮಾರ್ ಎಂಬಾತ ವೈದ್ಯರ ಸೋಗಿನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಆತನನ್ನು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.
ಕೆ.ಆರ್.ಎಸ್. ಪಕ್ಷದ ಕಾರ್ಯಕರ್ತರು ಸಾಕ್ಷಿ ಸಮೇತ ದೂರು ನೀಡಿ, ರೆಡ್ ಹ್ಯಾಂಡಾಗಿ ಹಿಡಿದು ಶಿವಕುಮಾರ್ ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ಸ್ಥಳ ಮಹಜರು ನಡೆಸಿದ್ದಾರೆ. ಈ ಕೇಂದ್ರದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.