
ಬೆಂಗಳೂರು: ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನಿರ್ಮಾಪಕ ಆನಂದ್ ಅಪ್ಪುಗೋಳ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ.
250 ಕೋಟಿ ರೂಪಾಯಿ ವಂಚನೆ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪಿಎಂಎಲ್ಎ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ದೂರು ದಾಖಲಿಸಿತ್ತು.
2002 ರ ಪಿಎಂಎಲ್‌ಎ ಅಡಿಯಲ್ಲಿ ಬೆಳಗಾವಿ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಅಧ್ಯಕ್ಷ ಆನಂದ ಬಾಲಕೃಷ್ಣ ಅಪ್ಪುಗೋಳ್ ಅವರನ್ನು 250 ಕೋಟಿ ರೂ. ಸಾರ್ವಜನಿಕ ಹಣವನ್ನು ವಂಚಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದೆ.