ಕೊಪ್ಪಳ: ಕೊಪ್ಪಳ ಜಿಲ್ಲೆ ಕಾರಟಗಿ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ. ಮಕ್ಕಳ ಗುಪ್ತಾಂಗ ಅಳತೆ ಮಾಡುವ ಮೂಲಕ ವಿಕೃತಿ ಮೆರೆದಿದ್ದ ಶಿಕ್ಷಕ, ಟ್ಯಷನ್ ಹೇಳಿಕೊಡುವುದಾಗಿ ಮತ್ತು ಸರ್ಕಾರಿ ಸೌಲಬ್ಯ ಕೊಡಿಸುವುದಾಗಿ ಬಾಲಕಿಯರ ತಾಯಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ.
ಮಹಿಳೆಯರೊಂದಿಗೆ ರಾಸಲೀಲೆ ನಡೆಸಿದ ವಿಡಿಯೋ ಇಟ್ಟುಕೊಂಡು ಪದೇಪದೇ ಲೈಂಗಿಕ ಕ್ರಿಯೆಗೆ ಬಲವಂತ ಮಾಡುತ್ತಿದ್ದ. ಈ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದ್ದರು. ಈತನ ವಿಕೃತದಾಟದ ಮತತ್ಉ ರಾಸಲೀಲೆ ವಿಡಿಯೋ ವೈರಲ್ ಆಗಿ ಸಸ್ಪೆಂಡ್ ಮಾಡಲಾಗಿತ್ತು.
ಕಳೆದ ಮೂರು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ ಶಿಕ್ಷಕ ಮಹಮ್ಮದ್ ಅಜರುದ್ದೀನ್ ನನ್ನು ಗೋವಾದಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ.