alex Certify ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿ ಕಿರುಕುಳ: ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿ ಕಿರುಕುಳ: ಆರೋಪಿ ಅರೆಸ್ಟ್

ಬೆಂಗಳೂರು: ಫೇಸ್ಬುಕ್ ನಲ್ಲಿ ಮಹಿಳೆಯರ ಸ್ನೇಹ ಬೆಳೆಸಿಕೊಂಡು ಅಶ್ಲೀಲ ಫೋಟೋ, ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಡಿವಾಳದ ಜೈಭೀಮ್ ನಗರದ ಪುರುಷೋತ್ತಮ್(40) ಬಂಧಿತ ಆರೋಪಿ. ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಈತನನ್ನು ಮೊಬೈಲ್ ಮೂಲಕ ಪತ್ತೆ ಹಚ್ಚಿ ಪೊಲೀಸರು ಬಂಧಿಸಿದ್ದಾರೆ.

ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಪುರುಷೋತ್ತಮ್ ಫೇಸ್ಬುಕ್ನಲ್ಲಿ ಹೆಣ್ಣುಮಕ್ಕಳಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಸ್ನೇಹ ಮಾಡಿಕೊಳ್ಳುತ್ತಿದ್ದ. ನಂತರ ಮೆಸೆಂಜರ್ ನಲ್ಲಿ ಅಶ್ಲೀಲ ವೀಡಿಯೋ, ಫೋಟೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಬಗ್ಗೆ ಹಲವು ಮಹಿಳೆಯರು ದೂರು ನೀಡಿದ್ದರು. ಆನ್ಲೈನ್ ಮೂಲಕ ಕೇಂದ್ರ ಗೃಹ ಇಲಾಖೆಯ ವೆಬ್ ಸೈಟ್ ನಲ್ಲಿ ದೂರು ದಾಖಲಿಸಲಾಗಿತ್ತು.

ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ತನಿಖೆ ಕೈಗೊಂಡು ವೇಳೆ ಆರೋಪಿ ಕುಟುಂಬ ಸಮೇತ ವಾಸ್ತವ್ಯ ಬದಲಾಯಿಸಿದ್ದ. ಮೊಬೈಲ್, ಫೇಸ್ಬುಕ್ ಮಾಹಿತಿ ಆಧರಿಸಿ ಆತನನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...