alex Certify ಮಹಿಳಾ ಉದ್ಯೋಗಿ ಮೈಕೈ ಮುಟ್ಟಿ ಕಿರುಕುಳ, ಹಾಸಿಗೆ ಹಂಚಿಕೊಳ್ಳಲು ಒತ್ತಡ ಹಾಕಿದ ಅಧಿಕಾರಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಉದ್ಯೋಗಿ ಮೈಕೈ ಮುಟ್ಟಿ ಕಿರುಕುಳ, ಹಾಸಿಗೆ ಹಂಚಿಕೊಳ್ಳಲು ಒತ್ತಡ ಹಾಕಿದ ಅಧಿಕಾರಿ ಅರೆಸ್ಟ್

ಬೆಂಗಳೂರು: ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸುಮನಹಳ್ಳಿ ಬೆಗ್ಗರ್ಸ್ ಕಾಲೋನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧೀಕ್ಷಕನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುಮನಹಳ್ಳಿಯ 23 ವರ್ಷದ ಮಹಿಳೆ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದು, ಆರೋಪಿತ ಅಧಿಕಾರಿ ಮೈ ಕೈ ಮುಟ್ಟಿ ಅಶ್ಲೀಲವಾಗಿ ಮಾತನಾಡುತ್ತಿದ್ದ. ತನ್ನೊಂದಿಗೆ ಹಾಸಿಗೆ ಹಂಚಿಕೊಳ್ಳಬೇಕೆಂದು ಒತ್ತಡ, ಬೆದರಿಕೆ ಹಾಕುತ್ತಿದ್ದ ಎಂದು ಮಹಿಳೆ ದೂರಿದ್ದಾರೆ.

ಕೆಲವು ದಿನಗಳಿಂದ ಅಧೀಕ್ಷಕ ಅನುಚಿತವಾಗಿ ವರ್ತಿಸುತ್ತಿದ್ದ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಹಿಳೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...