
ಬೆಂಗಳೂರು: ಕುಖ್ಯಾತ ರೌಡಿಶೀಟರ್ ಗಿರಿ ಅಲಿಯಾಸ್ ಕುಣಿಗಲ್ ಗಿರಿ ಎಂಬುವನನ್ನು ಬಂಧಿಸಲಾಗಿದೆ. 2-3 ತಿಂಗಳಿನಿಂದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕುಣಿಗಲ್ ಗಿರಿ ನಿನ್ನೆ ಸಹಚರರ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸರಿಂದ ಪರಿಶೀಲನೆ ನಡೆಸಲಾಗಿತ್ತು. ಬೈಕ್ ನಲ್ಲಿ ಮಾರಕಾಸ್ತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಕುಣಿಗಲ್ ಗಿರಿ ಬಂಧಿಸಲಾಗಿದೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಡಿ ಕೇಸು ದಾಖಲಾಗಿದೆ. ಕುಣಿಗಲ್ ಗಿರಿ ಸೇರಿದಂತೆ ಇಬ್ಬರನ್ನು ಬಂಧಿಸಿರುವ ಪೊಲೀಸರು ಕ್ರಮ ಜರುಗಿಸಿದ್ದಾರೆ.