ಬೆಂಗಳೂರು : ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಹಿನ್ನೆಲೆ ಸಿಸಿಬಿ ಪೊಲೀಸರನ್ನು ಅಭಿನಂದಿಸಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು. ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದು, ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ.ಹೋಟೆಲ್, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳೇ ಶಂಕಿತ ಉಗ್ರರ ಟಾರ್ಗೆಟ್ ಆಗಿದ್ದು, ಜನಸಂಖ್ಯೆ ಹೆಚ್ಚಿರುವ ಬಸ್ ನಿಲ್ದಾಣ ಹಾಗೂ ಹೋಟೆಲ್ ಗಳಲ್ಲಿ ಬಾಂಬ್ ಸ್ಪೋಟಿಸಲು ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಸ್ಪೋಟಕ ಮಾಹಿತಿ ಹೊರಬಿದ್ದಿದೆ.