alex Certify ಕೆಲಸದಿಂದ ವಜಾಗೊಂಡಿದ್ದ ನಿರ್ಮಿತಿ ಕೇಂದ್ರದ ಮಾಜಿ ನಿರ್ದೇಶಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದಿಂದ ವಜಾಗೊಂಡಿದ್ದ ನಿರ್ಮಿತಿ ಕೇಂದ್ರದ ಮಾಜಿ ನಿರ್ದೇಶಕ ಅರೆಸ್ಟ್

ಚಿತ್ರದುರ್ಗ: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಅವರನ್ನು ಚಿತ್ರದುರ್ಗ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೂಡಲಗಿರಿಯಪ್ಪ ವಿವಿಧ ಕಾಮಗಾರಿಗಳ ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಪಟಾಯಿಸಿದ್ದರು. ಬೇನಾಮೆ ವ್ಯಕ್ತಿಗಳ ಹೆಸರಲ್ಲಿ ಚೆಕ್ ನೀಡಿ ಹಣ ಗುಳುಂ ಮಾಡಿದ್ದರು. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸತ್ಯನಾರಾಯಣ ಅವರು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ಸಿಇಎನ್ ಠಾಣೆಗೆ ವರ್ಗಾವಣೆಯಾಗಿತ್ತು.

ಮೂಡಲಗಿರಿಯಪ್ಪ ಅವರನ್ನು ಚಿತ್ರದುರ್ಗ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿರ್ಮಿತಿ ಕೇಂದ್ರದ ಹಣ ಲಪಟಾಯಿಸಿದ ಪ್ರಕರಣದಲ್ಲಿ ಮೂಡಲಗಿರಿಯಪ್ಪ ಅವರನ್ನು ತಿಂಗಳ ಹಿಂದೆಯಷ್ಟೇ ಡಿಸ್ ಮಿಸ್ ಮಾಡಲಾಗಿತ್ತು, ಅವರ ವಿರುದ್ಧ ಮತ್ತೊಂದು ದೂರು ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...