ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಅವಾಚ್ಯವಾಗಿ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಮೂಲದ ಮೋಹಿತ್ ನರಸಿಂಹಮೂರ್ತಿ(38) ಬಂಧಿತ ವ್ಯಕ್ತಿ ಎಂದು ಹೇಳಲಾಗಿದೆ. ಸಿಎಂ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ಬಗ್ಗೆ ಅವಾಚ್ಯವಾಗಿ ನಿಂದಿಸಿ ಮೋಹಿತ್ ವಿಡಿಯೋ ಹರಿಬಿಟ್ಟಿದ್ದ. ಈ ಕುರಿತಾಗಿ ಸತೀಶ್ ಜಾರಕಿಹೊಳಿಯವರ ಬೆಂಬಲಿಗ ವಿಜಯ ತಳವಾರ್ ದೂರು ನೀಡಿದ್ದರು. ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ತುಮಕೂರಿನಲ್ಲಿ ಆರೋಪಿಯನ್ನು ಬಂಧಿಸಿ ಕರೆತಂದಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.