ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗಾರ್ವೆಭಾವಿಪಾಳ್ಯದ ಶ್ರೀಧರ್, ಸಾಗರ್ ಮತ್ತು ನವೀನ್ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಬೆಂಗಳೂರು ನಗರ ಪೊಲೀಸರ ವಿಶೇಷ ತಂಡದಿಂದ ಶ್ರೀಧರ್, ಸಾಗ್, ನವೀನ್ ಅವರನ್ನು ಬಂಧಿಸಲಾಗಿದೆ.
ಬಡವರು, ಶ್ರೀಮಂತರು ಎನ್ನುವ ಕಾರಣಕ್ಕೆ ಕೃತ್ಯವೆಸಗಿದ್ದಾರೆ. ದೊಡ್ಡ ದೊಡ್ಡ ಕಾರುಗಳಲ್ಲಿ ಸತೀಶ್ ರೆಡ್ಡಿ ಓಡಾಡುತ್ತಿದ್ದರು. ದೊಡ್ಡವರಿಗೆ ಬುದ್ಧಿಕಲಿಸಬೇಕೆಂಬ ಉದ್ದೇಶದಿಂದ ಬೆಂಕಿ ಹಚ್ಚಿದ್ದಾರೆ. ಸತೀಶ್ ರೆಡ್ಡಿ ಮನೆ ಆವರಣಕ್ಕೆ ನುಗ್ಗಿ ಎರಡು ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.