alex Certify ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಹತ್ಯೆ, ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಹತ್ಯೆ, ಮೂವರು ಅರೆಸ್ಟ್

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನಲ್ಲಿ ಬಾಲಕಿಯರಿಬ್ಬರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ.

ಕುದುರಿ ಸಾಲವಾಡಗಿ ಗ್ರಾಮದ ಅಬೂಬಕರ್, ದಸ್ತಗೀರ್ ಸಾಬ್, ಯಲ್ಲಪ್ಪ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಬಾಲಕಿಯರ ಸಹೋದರ ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದು ಪೋಕ್ಸೋ ಕಾಯ್ದೆಯಡಿ ಬಸವನಬಾಗೇವಾಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

10 ದಿನಗಳ ಹಿಂದೆ 13 ಮತ್ತು 15 ವರ್ಷದ ಬಾಲಕಿಯರನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿ ಬಳಿಕ ಅವರನ್ನು ಹತ್ಯೆ ಮಾಡಿ ಬಾವಿಗೆ ಎಸೆಯಲಾಗಿತ್ತು. ಮೇ 12 ರಂದು ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯರು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಎರಡು ದಿನಗಳ ಬಳಿಕ ಯಾಳವಾರ ಗ್ರಾಮದ ಜಮೀನಿನ ಬಾವಿಯಲ್ಲಿ ಅವರ ಮೃತದೇಹಗಳು ಕಂಡುಬಂದಿದ್ದವು. ಮೇ 14 ರಂದು ಬಸವನಬಾಗೇವಾಡಿ ಠಾಣೆಗೆ ದೂರು ನೀಡಲಾಗಿತ್ತು.

ಪೊಲೀಸರು ತನಿಖೆ ಕೈಗೊಳ್ಳಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಅನೇಕ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿತ್ತು. ಬಾಲಕಿಯರ ಕುಟುಂಬಕ್ಕೆ ತಲಾ 4.12 ಲಕ್ಷ ರೂಪಾಯಿ ಪರಿಹಾರ ಧನ ಮಂಜೂರು ಮಾಡಲಾಗಿದೆ. ಆರೋಪಿಗಳ ಬಂಧನಕ್ಕೆ ತೀವ್ರ ಒತ್ತಡ ಕೇಳಿಬಂದ ನಂತರ ಪೊಲೀಸರು ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...