
ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಅವರು ಮಾಹಿತಿ ನೀಡಿದ್ದು, ಕಾಡುಗೋಡಿ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಸಂಬಂಧ ಎಫ್ಐಆರ್ ದಾಖಲಾಗಿತ್ತು. ಎರಡು ಎಫ್ಐಆರ್ ನಲ್ಲಿ ಬಂಧಿತನ ಹೆಸರು ಉಲ್ಲೇಖವಾಗಿತ್ತು. ಬಂಧಿತ ಆರೋಪಿಯ ಒಂದು ಸುತ್ತಿನ ವಿಚಾರಣೆ ನಡೆಸಲಾಗಿದೆ. ಬಂಧಿತ ಆರೋಪಿ ಪ್ರಕರಣದ ಪ್ರಮುಖ ಆರೋಪಿ ರವಿಕುಮಾರ್ ಆಪ್ತನಾಗಿದ್ದಾನೆ.