alex Certify ವಕೀಲರ ಭೇಟಿಗೆ ಬಂದಿದ್ದ ವೋಟರ್ ಐಡಿ ಅಕ್ರಮದ ಪ್ರಮುಖ ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಕೀಲರ ಭೇಟಿಗೆ ಬಂದಿದ್ದ ವೋಟರ್ ಐಡಿ ಅಕ್ರಮದ ಪ್ರಮುಖ ಆರೋಪಿ ಅರೆಸ್ಟ್

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರವಿಕುಮಾರ್ ನನ್ನು ಬಂಧಿಸಲಾಗಿದೆ.

ಲಾಲ್ ಭಾಗ್ ಸಮೀಪ ಕಾರ್ಯಾಚರಣೆ ನಡೆಸಿದ ಪೊಲೀಸರು ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ನನ್ನು ಬಂಧಿಸಿದ್ದಾರೆ. ರವಿಕುಮಾರ್ ಸಹೋದರ ಕೆಂಪೇಗೌಡ ಹಾಗೂ ಸಂಸ್ಥೆಯ ಸಿಬ್ಬಂದಿಗಳಾದ ಧರ್ಮೇಶ್ ರೇಣುಕಾ ಪ್ರಸಾದ್, ಇ-ಪ್ರಕ್ಯೂರ್ಮೆಂಟ್ ಮೇಲ್ವಿಚಾರಕ ಪ್ರಜ್ವಲ್ ಅವರನ್ನು ಮೊದಲೇ ಬಂಧಿಸಲಾಗಿದೆ.

ಮತದಾರರ ಮಾಹಿತಿ ಕಳವು ಪ್ರಕರಣದ ಪ್ರಮುಖ ಆರೋಪಿ ರವಿಕುಮಾರ್ ನನ್ನು ಭಾನುವಾರ ರಾತ್ರಿ ಬಂಧಿಸಿರುವ ಹಲಸೂರು ಗೇಟ್ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದ ರವಿಕುಮಾರ್ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು. ಭಾನುವಾರ ರಾತ್ರಿ ರವಿಕುಮಾರ್ ವಕೀಲರ ಭೇಟಿಗೆ ಬಂದಿದ್ದ ರವಿಕುಮಾರ್ ನನ್ನು ಬಂಧಿಸಲಾಗಿದೆ,

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...