![](https://kannadadunia.com/wp-content/uploads/2022/08/531099-arrest.jpg)
ತುಮಕೂರು: ತುಮಕೂರು ತಾಲೂಕಿನ ಪಂಡಿತನಹಳ್ಳಿ ಗ್ರಾಮದ ಹೊರವಲಯದಲ್ಲಿ ಬುಧವಾರ ರಾತ್ರಿ ನವಿಲು ಮಾಂಸ ತಿನ್ನುತ್ತಿದ್ದ ಮೂವರನ್ನು ಬಂಧಿಸಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದು, ಬೇಯಿಸಿದ ಮತ್ತು ಹಸಿಯ ನವಿಲು ಮಾಂಸ ವಶಕ್ಕೆ ಪಡೆದುಕೊಂಡಿದ್ದಾರೆ. ಒಡಿಶಾದ ಬಿಟ್ಟಿಂಗ್ ನಾಯಕ್, ಬೈಶಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು.
ಪಂಡಿತನಹಳ್ಳಿ ಸಮೀಪ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು, ಸುತ್ತಲಿನ ಗ್ರಾಮೀಣ ಪ್ರದೇಶದ ವಿವಿಧೆಡೆ ನವಿಲುಗಳನ್ನು ಕೊಂದು ಮಾಂಸ ತಿನ್ನುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.