alex Certify Mandya : ಹೆಲ್ಮೆಟ್ ಧರಿಸಿ ಬಂದು ‘ಲೈಂಗಿಕ ಕಿರುಕುಳ’ ನೀಡ್ತಿದ್ದವ ಅರೆಸ್ಟ್ : ಒಂಟಿ ಮಹಿಳೆಯರೇ ಈತನ ಟಾರ್ಗೆಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Mandya : ಹೆಲ್ಮೆಟ್ ಧರಿಸಿ ಬಂದು ‘ಲೈಂಗಿಕ ಕಿರುಕುಳ’ ನೀಡ್ತಿದ್ದವ ಅರೆಸ್ಟ್ : ಒಂಟಿ ಮಹಿಳೆಯರೇ ಈತನ ಟಾರ್ಗೆಟ್..!

ಮಂಡ್ಯ : ಮಂಡ್ಯದಲ್ಲಿ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 1 ತಿಂಗಳಿಂದ ಈತ ಹೆಲ್ಮೆಟ್ ಧರಿಸಿ ಬಂದು ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ತಿಳಿದು ಬಂದಿದೆ.ಹಲವೆಡೆ ವಿಕೃತವಾಗಿ ನಡೆದುಕೊಂಡಿದ್ದ ಬೈಕ್ ಸವಾರ ಕೊನೆಗೂ ಲಾಕ್ ಆಗಿದ್ದಾನೆ.

ನಿನ್ನೆ ಸಂಜೆ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಲು ಯತ್ನಿಸಿದ ವೇಳೆ ಆರೋಪಿಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಂದ ಮಾಹಿತಿ ಪಡೆದ ಪೊಲೀಸರು ಚಂದ್ರಶೇಖರ್ ನನ್ನು ಬಂಧಿಸಿದ್ದಾರೆ.

ಸಿಸಿಟಿವಿಯ ದೃಶ್ಯ ಆಧರಿಸಿದ ಪೊಲೀಸರು ಆರೋಪಿ ಚಂದ್ರಶೇಖರ್ ನನ್ನು ಬಂಧಿಸಿದ್ದಾರೆ. ಹೆಲ್ಮೆಟ್ ಧರಿಸಿ ಬೈಕ್ನಲ್ಲಿ ಬಂದು ರಸ್ತೆಯಲ್ಲಿ ಹೋಗ್ತಿದ್ದ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದನು.ಈ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...