alex Certify ಗ್ಯಾಸ್ ಆನ್ ಮಾಡಿ ಸಾಮೂಹಿಕ ಆತ್ಮಹತ್ಯೆ ಬೆದರಿಕೆ: ಕಲಾವಿದನ ಕುಟುಂಬದಿಂದ ಹೈಡ್ರಾಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾಸ್ ಆನ್ ಮಾಡಿ ಸಾಮೂಹಿಕ ಆತ್ಮಹತ್ಯೆ ಬೆದರಿಕೆ: ಕಲಾವಿದನ ಕುಟುಂಬದಿಂದ ಹೈಡ್ರಾಮಾ

ಮಡಿಕೇರಿ: ಮಡಿಕೇರಿ ನಗರದಲ್ಲಿ ಕಲಾವಿದನ ಕುಟುಂಬದವರು ಹೈಡ್ರಾಮಾ ನಡೆಸಿದ್ದಾರೆ. ಬೆಂಕಿ ಹಚ್ಚಿಕೊಂಡು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನಗರಸಭೆ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣ ಮಾಡಿದ ಆರೋಪ ಕೇಳಿಬಂದಿದೆ. ಜೆಸಿಬಿ ತೆಗೆದುಕೊಂಡು ತಂದು ಮನೆ ಕೆಡವಲು ಮುಂದಾದಾಗ ಹೈಡ್ರಾಮಾ ಮಾಡಿದ್ದಾರೆ. ಮನೆಯ ಗ್ಯಾಸ್ ಆನ್ ಮಾಡಿ ಬೆಂಕಿಪೆಟ್ಟಿಗೆ ಹಿಡಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೈಡ್ರಾಮಾ ನಡೆಸಿದ್ದಾರೆ.

ಮಡಿಕೇರಿ ನಗರದ ಚೈನ್ ಗೇಟ್ ಬಳಿ ಘಟನೆ ನಡೆದಿದೆ. ಅಕ್ರಮ-ಸಕ್ರಮದ ಅಡಿಯಲ್ಲಿ ಕುಟುಂಬದವರು ಅರ್ಜಿ ಹಾಕಿದ್ದು, ಇಂದು ಫೇಸ್ಬುಕ್ ನಲ್ಲಿ ಸಂದೀಪ್ ವ್ಯಂಗ್ಯಚಿತ್ರವನ್ನು ಪ್ರಕಟಿಸಿದ್ದರು. ನಗರಸಭೆ ಕಮಿಷನರ್ ಮತ್ತು ಕೌನ್ಸಿಲರ್ ಬಗ್ಗೆ ವ್ಯಂಗ್ಯವಾಡಿದ್ದರು. ಅವರ ವಿರುದ್ಧ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...