ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಾಗಿದೆ.
ಶುಕ್ರವಾರ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ ನಿಷೇಧಾಜ್ಞೆ ಉಲ್ಲಂಘನೆ ಮಾಡಿದ್ದಾರೆ. ಅಲ್ಲದೇ, ಭೇಟಿಯ ವೇಳೆ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಸಂತ್ರಸ್ತರ ಮನೆಗೆ ಭೇಟಿ ನೀಡಿದ್ದ ವೇಳೆ ಕೋಮುಭಾವನೆ ಕೆರಳಿಸುವ ಭಾಷಣ ಮಾಡಿದ್ದಾರೆ ಎನ್ನಲಾಗಿದ್ದು, ವಿಡಿಯೋ ಆಧಾರದ ಮೇಲೆ ಪುತ್ತಿಲ ಅವರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.