
ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲವೆಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದರೂ ಮತ್ತೆ ಮತ್ತೆ ಚರ್ಚೆ ನಡೆಯುತ್ತಲೇ ಇದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರವಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತೆ ಬ್ಯಾಟಿಂಗ್ ಮಾಡಿದ್ದಾರೆ. ಮುಖ್ಯಮಂತ್ರಿ, ಸಚಿವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಪುನರುಚ್ಚರಿಸಿದ್ದಾರೆ.
ಕೆಲವರಲ್ಲಿ ಬಿನ್ನಾಭಿಪ್ರಾಯ ಇರಬಹುದು. ಕರ್ನಾಟಕಕ್ಕೆ ಹೋಗಿ ಎಲ್ಲರ ಜೊತೆಗೂ ಮಾತನಾಡುತ್ತೇನೆ ಎಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದು, ಕಾಂಗ್ರೆಸ್ ಗೂಢಚಾರಿಕೆ ಮಾಡುವುದರಲ್ಲಿಯೇ ಬ್ಯುಸಿಯಾಗಿದೆ ಟೀಕಿಸಿದ್ದಾರೆ.